-ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹೊರಟಿದ್ದ ಕಾರ್ಮಿಕರು
ರಾಯಚೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಯಚೂರು ಸೇರಿ ವಿವಿಧೆಡೆಯಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದ 800 ಹೆಚ್ಚು ತುಂಗಭದ್ರಾ ವಲಯ ಹಂಗಾಮಿ ಕಾರ್ಮಿಕರನ್ನ ಬಂಧಿಸಲಾಗಿದೆ.
Advertisement
ಬುಧವಾರ ಮಧ್ಯರಾತ್ರಿ ಬೆಂಗಳೂರಿಗೆ ಹೋಗದಂತೆ ತುಮಕೂರು ಬಳಿ ಬಂಧಿಸಿ ರಾಯಚೂರು ಸೇರಿ ಆಯಾ ಜಿಲ್ಲೆಗಳಿಗೆ ಕರೆತರಲಾಗಿದೆ. ಕಾರ್ಮಿಕ ಮುಖಂಡರನ್ನ ಪೊಲೀಸ್ ಠಾಣೆಗಳಲ್ಲಿ ಬಂಧಿಸಿಡಲಾಗಿದೆ.
Advertisement
Advertisement
ವೇತನ ಹೆಚ್ಚಳ, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಏಪ್ರಿಲ್ 4 ರಿಂದ ಬಳ್ಳಾರಿ ಮುನಿರಾಬಾದ್‍ನಿಂದ ಕಾರ್ಮಿಕರು ಬೃಹತ್ ಪಾದಯಾತ್ರೆ ಜಾಥಾ ನಡೆಸಿದ್ದರು. ಅಂಬೇಡ್ಕರ್ ಜಯಂತಿಯಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಮ್ಮಿಕೊಂಡಿದ್ದರು. ಹೀಗಾಗಿ ಮಾರ್ಗ ಮಧ್ಯದಲ್ಲೆ ಕಾರ್ಮಿಕರನ್ನ ಬಂಧಿಸಲಾಗಿದೆ. ಬಂಧನವೇಳೆ ಪೊಲೀಸರು ಕನಿಷ್ಠ ಸೌಜನ್ಯವನ್ನೂ ತೋರಿಸಿಲ್ಲ ಅಂತ ಆರೋಪಿಸಿರುವ ಕಾರ್ಮಿಕರು ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದ್ದಾರೆ.
Advertisement