ಬೆಂಗಳೂರು: ಧರ್ಮಸ್ಥಳ (Dharmasthala Case) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ (High Court) ರಿಟ್ ಅರ್ಜಿ (Writ petition) ಸಲ್ಲಿಸಿದ ಬಳಿಕ ತನಗೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾನೆ
ಈ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಚಿನ್ನಯ್ಯ(Chinnaiah) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ನೀಡಿದ್ದಾನೆ.
ದೂರಿನಲ್ಲಿ, ಈ ಅರ್ಜಿಯ ಹಿಂದೆ ಯಾರು ಇದ್ದಾರೆ?, ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ? ಈ ಕೆಲಸವನ್ನು ಯಾರ ಪ್ರೇರಣೆಯಿಂದ ಮಾಡುತ್ತಿದ್ದೀರಿ? ಎಂಬ ಪ್ರಶ್ನೆಗಳನ್ನು ಪದೇ ಪದೇ ಕೇಳಲಾಗಿದೆ ಎಂದು ಉಲ್ಲೇಖಿಸಿದ್ದಾನೆ. ಅಲ್ಲದೆ ತನ್ನ ಮೊಬೈಲ್ ನಂಬರ್ ಕೇಳಿ ಮಾತನಾಡಲು ಒತ್ತಾಯ ಮಾಡುತ್ತಿದ್ದಾರೆ. ಕುಟುಂಬದವರ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು – ಎಕ್ಸ್ ಪೋಸ್ಟ್‌ನಲ್ಲಿ ನಟ ಸ್ಪಷ್ಟನೆ
ಗಿರೀಶ್ ಮಟ್ಟಣ್ಣನವರ್ ಪರೋಕ್ಷವಾಗಿ ಬೆದರಿಕೆ ಹಾಕುವ ಹಾಗೂ ಮಾನಸಿಕ ಒತ್ತಡ ಹೇರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಚಿನ್ನಯ್ಯ ದೂರಿನಲ್ಲಿ ತಿಳಿಸಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ 200 ಕೋಟಿ ಷಡ್ಯಂತ್ರ – ಚಿನ್ನಯ್ಯನಿಗೆ ಕರೆ ಮಾಡಿ ಅಪ್ಪಿಕೊಳ್ಳುತ್ತೇನೆ ಎಂದಿದ್ದ ಪ್ರಕಾಶ್ ರಾಜ್
