Bengaluru City
ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಬಲಗೈ ಬಂಟ ಅರೆಸ್ಟ್
ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್‍ಆರ್ ವಿಶ್ವನಾಥ್ ಬಲಗೈ ಬಂಟನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ನಾಗಶೆಟ್ಟಿಹಳ್ಳಿ ನಿವಾಸಿಯಾಗಿರುವ ಸತೀಶ್ ನನ್ನು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಕಾಮಗಾರಿಯೊಂದರ ವಿಚಾರವಾಗಿ 15 ದಿನದ ಹಿಂದೆ ಬೆದರಿಕೆ ಕಾಂಗ್ರೆಸ್ ಸ್ಥಳೀಯ ಮುಖಂಡರೊಬ್ಬರಿಗೆ ಸತೀಶ್ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಪೊಲೀಸರು 44 ನೇ ಎಸಿಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ 6 ದಿನ ಕಸ್ಟಡಿಗೆ ಪಡೆದಿದ್ದಾರೆ.
