DistrictsKarnatakaLatestMain PostShivamogga

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವತ್ಥ ನಾರಾಯಣ್ ಶಾಮೀಲು: ಸಿದ್ದು ಆರೋಪ

ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಕಾರಿನ ಚಾಲಕ ಪ್ರಕಾಶ್ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಪರಾರಿಯಾರಿದ್ದಾರೆ. ರಾಜನಂದಿನಿ ಅವರು ಇಲ್ವಾ, ಇತ್ತೀಚೆಗೆ ಅವರದ್ದು ಬಹಳ ಆಗಿದೆ. ಹೀಗೆ ಮುಂದುವರಿದರೆ ಅವರನ್ನು ಮುಗಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ. ಇದನ್ನೂ ಓದಿ: ‘ಆರ್‌ಎಸ್‌ಎಸ್’ ದೇಶದ ಶ್ರೀಮಂತ ಎನ್‍ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್

ಆದರೆ ಈ ವೇಳೆ ಕಾರಿನಲ್ಲಿ ರಾಜನಂದಿನಿ ಇರಲಿಲ್ಲ. ಅವರು ತಮ್ಮ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ಆರೋಪಿ ಮಂಜು, ಚಾಲಕ ಪ್ರಕಾಶ್ ನ ಸಮ್ಮುಖದಲ್ಲಿ ಬೆದರಿಕೆ ಹಾಕಿದ್ದಾನೆ. ನಿಮ್ಮ ಮೇಡಂಗೆ ಈ ಬಗ್ಗೆ ಹೋಗಿ ಹೇಳು ಎಂದಿದ್ದಾನೆ. ಘಟನೆ ಸಂಬಂಧ ಚಾಲಕ ಪ್ರಕಾಶ್ ಆರು ಜನರ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published.

Back to top button