RSS ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಎಚ್ಚರಿಕೆ

Public TV
1 Min Read
MOHAN BHAGAWAT

ಪಾಟ್ನಾ: ಬಿಹಾರ ಭೇಟಿ ವೇಳೆ ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ಐಎಸ್‍ಐ ಹಾಗೂ ಇಸ್ಲಾಮಿಕ್ ಭಯೋತ್ಪಾದಕರಿಂದ ಆರ್ ಎಸ್‍ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagawat) ಮೇಲೆ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆಯು ಎಚ್ಚರಿಕೆ ನೀಡಿದೆ.

ಮೋಹನ್ ಭಾಗವತ್ ಅವರು ಈಗಾಗಲೇ ಝಡ್ ಮಾದರಿಯ ಭದ್ರತೆಯನ್ನು ಹೊಂದಿದ್ದಾರೆ. ಆದರೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲೆಂದು ಎರಡು ದಿನಗಳ ಭೇಟಿಗಾಗಿ ಪಾಟ್ನಾಗೆ ಆಗಮಿಸಿರುವ ಭಾಗವತ್ ಅವರಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾಗಲ್ಪುರದಲ್ಲಿ ಪ್ರತಿಯೊಂದು ವಾಹನ, ವಸತಿಗೃಹ, ಜನದಟ್ಟಣೆ ಪ್ರದೇಶಗಳಲ್ಲಿ ಪ್ರತಿಯೊಬ್ಬರನ್ನೂ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟಿನಲ್ಲಿ ಗುಪ್ತಚರ ಇಲಾಖೆಯ ಎಚ್ಚರಿಕೆಯಿಂದಾಗಿ ಮೋಹನ್ ಭಾಗವತ್ ಅವರಿಗೆ ಎಲ್ಲಾ ರೀತಿಯ ಭದ್ರತೆಗಳನ್ನು ಒದಗಿಸಲಾಗುತ್ತಿದೆ ಎಂದು ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article