ನಟ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದು ಒಂದು ತಿಂಗಳು ಕಳೆದಿದೆ. ಅವರು ದೂರು ದಾಖಲಿಸಿ 25 ದಿನಕ್ಕೂ ಹೆಚ್ಚು ದಿನಗಳು ಉರುಳಿವೆ. ಪತ್ರ ಬರೆದವರ ಬೆನ್ನತ್ತಿರುವ ಸಿಸಿಬಿಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ, ತಮ್ಮ ಪ್ರಯತ್ನವನ್ನು ಅವರು ನಿಲ್ಲಿಸಿಲ್ಲ. ಈ ಕುರಿತು ಇದೇ ಮೊದಲ ಬಾರಿಗೆ ಕಿಚ್ಚು ಸುದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆ ಹೊರಡುತ್ತಿರುವ ಸಂದರ್ಭದಲ್ಲಿ ಬೆದರಿಕೆ ಪತ್ರದ ಬಗ್ಗೆ ಮಾತನಾಡಿದ್ದಾರೆ.
Advertisement
ಬೆದರಿಕೆಯ ಪತ್ರದ (Threat letter) ಬಗ್ಗೆ ಮಾತನಾಡಿದ ಸುದೀಪ್, ‘ನಂಗೆ ತುಂಬಾ ಲವ್ ಲೇಟರ್ ಗಳು ಬರ್ತಾ ಇರ್ತಾವೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ’ ಎಂದು ಚುಟುಕಾಗಿ ಉತ್ತರಿಸಿದ್ದಾರೆ. ಈ ಮೂಲಕ ಪತ್ರ ಬರೆದವರ ಬಗ್ಗೆ ಕೇರ್ ಮಾಡುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಆ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ನನ್ನ ಪಾಡಿಗೆ ನಾನು ಇವತ್ತಿನಿಂದ ಪ್ರಚಾರಕ್ಕೆ ಹೋಗ್ತಾ ಇದೀನಿ’ ಎಂದಿದ್ದಾರೆ.
Advertisement
Advertisement
ಇಂದಿನಿಂದ ಸುದೀಪ್ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ (Campaign) ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್ ಡೇಟ್
Advertisement
ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ.
ಜಗಳೂರು (Jagaluru) ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.
ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.