ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Public TV
1 Min Read
mobile camera spy video

ದಾವಣಗೆರೆ: ಅಶ್ಲೀಲ ವಿಡಿಯೋ (Video) ಹರಿಬಿಡುವ ಬೆದರಿಕೆಗೆ (Threat) ಬೇಸತ್ತ ವಿದ್ಯಾರ್ಥಿನಿಯೊಬ್ಬಳು (Student) ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು (Jagaluru) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಲೆಗೆ ಹೋಗುವ ವೇಳೆ 17 ವರ್ಷದ ವಿದ್ಯಾರ್ಥಿನಿಗೆ ಇಬ್ಬರು ಯುವಕರು ಪರಿಚಯವಾಗಿದ್ದರು. ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿದ ಯುವಕರು ಆಕೆಯ ಅಶ್ಲೀಲ ವಿಡಿಯೋವನ್ನು ಮಾಡಿದ್ದರು. ಅಲ್ಲದೇ ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪೊಲೀಸರಿಂದ ಕಿರುಕುಳ ಆರೋಪ – ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆ

ಯುವಕರ ಈ ಬೆದರಿಕೆಗೆ ಬೇಸತ್ತ ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯ ಬಳಿಕ ಆಕೆಯನ್ನು ಉಡುಪಿಯ (Udupi) ಮಣಿಪಾಲ ಆಸ್ಪತ್ರೆಗೆ (Manipal Hospital) ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂಬ ಗಾಯಾಳು ವಿದ್ಯಾರ್ಥಿನಿ ಹೇಳಿಕೆ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಮರ್ಡರ್ – ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳ ಬಂಧನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article