ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಗೆ ಜೀವ ಬೆದರಿಕೆ (Threat) ಹಾಕುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪೊಲೀಸ್ ಇಲಾಖೆಯು ಅವರಿಗೆ ಭಾರೀ ಭದ್ರತೆ ನೀಡಿದ್ದರೂ, ಅಂಚೆ ಮೂಲಕ, ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಅಂಥದ್ದೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ವಿದ್ಯಾರ್ಥಿಯೊಬ್ಬನಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಸಲ್ಮಾನ್ ಖಾನ್ ಗೆ ಬೆದರಿಕೆಯ ಇ-ಮೇಲ್ ರವಾನಿಸಿದ್ದ ಬ್ರಿಟನ್ (Britain) ನಲ್ಲಿರುವ ಭಾರತದ ವಿದ್ಯಾರ್ಥಿಗೆ (Student) ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ (Look Out Notice) ಜಾರಿ ಮಾಡಿದ್ದಾರೆ. ಬ್ರಿಟನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಈ ಸ್ಟೂಡೆಂಟ್ ಹರಿಯಾಣದವನು ಎಂದು ಹೇಳಲಾಗುತ್ತಿದೆ. ಜೈಲಿನಲ್ಲಿರುವ ಪಾತಕಿ ಗೋಲ್ಡಿ ಬ್ರಾರ್ ಹೆಸರಿನಲ್ಲಿ ಈತ ಬೆದರಿಕೆ ಒಡ್ಡಿದ್ದ ಎಂದು ವರದಿಯಾಗಿದೆ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್
ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.
ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ. ಹಾಗಾಗಿ ಸಲ್ಮಾನ್ ಖಾನ್ ಗೆ ಸಾಕಷ್ಟು ಭದ್ರತೆಯನ್ನು ನೀಡಲಾಗಿದೆ.