ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಪುಢಾರಿ ನಾಯಕ ರಾಜೀವ್ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಕೇರಳದ ಗಡಿ ಭಾಗದಲ್ಲಿ ರಾಜೀವ್ ಗೌಡನನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಬಂಧನ ಮಾಡದಂತೆ ರಾಜೀವ್ ಗೌಡ ಜಾಮೀನು ಅರ್ಜಿ ಸಲ್ಲಿಸಿದ್ದ. ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಇದನ್ನೂ ಓದಿ: ನಗರಸಭೆಗೆ ಬೆಂಕಿ ಹಾಕಿಸುತ್ತೇನೆ – ಶಿಡ್ಲಘಟ್ಟ ಪೌರಾಯುಕ್ತೆಗೆ ಕೈ ನಾಯಕನಿಂದ ಜೀವ ಬೆದರಿಕೆ
ಸಚಿವ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ (Cult Movie Flex) ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ (Sidlaghatta) ನಗರಸಭೆ ಪೌರಾಯುಕ್ತೆ ಅಮೃತ ಗೌಡಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದ.
ಧಮ್ಕಿ ಹಾಕಿದ್ದ ಆಡಿಯೋ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಕ್ಷಮೆ ಕೋರಿದ್ದ. ಆದರೆ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ ಬಳಿಕ ಪರಾರಿಯಾಗಿದ್ದ ರಾಜೀವ್ ಜಾಮೀನು ಪಡೆಯಲು ನಾನಾ ಕಸರತ್ತು ನಡೆಸಿದ್ದ. ಕೋರ್ಟ್ ಜಾಮೀನು ವಜಾಗೊಳಿಸಿದ ಬೆನ್ನಲ್ಲೇ ಬಂಧನ ಯಾವಾಗ ಎಂದು ಮಾಧ್ಯಮಗಳು ಸರ್ಕಾರವನ್ನು ಪ್ರಶ್ನಿಸುತ್ತಿದ್ದವು. ಕೊನೆಗೆ 13 ದಿನದ ಬಳಿಕ ರಾಜೀವ್ ಗೌಡ ಬಂಧನವಾಗಿದ್ದು ನಾಳೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.
ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ (Srinivas Gowda) ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಎರಡು ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಎರಡು ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದ. ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ (Chikkaballapura) ಎಸ್‌ಪಿ ಕುಶಾಲ್ ಚೌಕ್ಸಿ ಎರಡು ತಂಡಗಳನ್ನು ನೇಮಿಸಿದ್ದರು. ಇದನ್ನೂ ಓದಿ: ಅವಾಚ್ಯ ಶಬ್ಧಗಳಿಂದ ನಿಂದನೆ, ಕೊಲೆ ಬೆದರಿಕೆ – ʻಕೈʼ ಮುಖಂಡನ ವಿರುದ್ಧ ಪೌರಾಯುಕ್ತೆ ಅಮೃತಗೌಡ ದೂರು
132 – ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಬೆದರಿಕೆ
351(3) – ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ, ಮಹಿಳೆಯ ಚಾರಿತ್ರ್ಯವಧೆ
56 – ಅಪರಾಧಕ್ಕೆ ಪ್ರಚೋದನೆ ಅಥವಾ ಪ್ರೇರಣೆ
224 – ಸರ್ಕಾರಿ ನೌಕರನಿಗೆ ದೈಹಿಕ ಅಥವಾ ಮಾನಸಿಕವಾಗಿ ಗಾಯ ಮಾಡುವ ಬೆದರಿಕೆ
352 – ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ
352 – ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ
353(2) – ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ ವದಂತಿ ಪ್ರಸಾರ

