ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾಚಣಾ ಕಣದಿಂದ ಹಿಂದೆ ಸರಿಯುವಂತೆ ಜಿಲ್ಲೆಯ ಬೈಂದೂರಿನ ಜೆಡಿಎಸ್ ಅಭ್ಯರ್ಥಿಗೆ ದುಬೈನಿಂದ ಕೊಲೆ ಬೆದರಿಕೆ ಕರೆ ಬಂದಿದೆ.
ಬೈಂದೂರು ಅಭ್ಯರ್ಥಿ ರವಿ ಶೆಟ್ಟಿಗೆ ದುಬೈನಿಂದ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ರವಿ ಶೆಟ್ಟಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಿದ್ದು, ಪೊಲೀಸರು ರವಿ ಶೆಟ್ಟಿಗೆ ಗನ್ ಮ್ಯಾನ್ ನೀಡಿದ್ದಾರೆ.
Advertisement
Advertisement
ಫೀಲ್ಡ್ ನಲ್ಲಿ ಸೈಲೆಂಟ್ ಆಗು. ಇಲ್ಲದಿದ್ದರೆ ಮನೆಗೆ ಹೋಗಲ್ಲ ಅಂತ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ. ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷನಾಗಿರುವ ರವಿ ಶೆಟ್ಟಿ ಕಳೆದ ಒಂದು ವರ್ಷದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
Advertisement
ಎದುರಾಳಿ ಕಾಂಗ್ರೆಸ್ ಮತ್ತು ಬಿಜೆಪಿಗೆ ನಡುಕ ಹುಟ್ಟಿದ್ದು, ತಮ್ಮ ಮತಗಳ ವಿಭಜನೆಯಾಗಬಹುದೆಂದು ಈ ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ರವಿ ಶೆಟ್ಟಿ ದೂರಿದ್ದಾರೆ. ಆದ್ರೆ ನಾನು ಯಾವುದೇ ಗೊಡ್ಡು ಬೆದರಿಕೆಗೆ ಬಗ್ಗಲ್ಲ, ಅಂತ ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಹೇಳಿದ್ದಾರೆ.
Advertisement
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮಾತನಾಡಿ, ಬೈಂದೂರು ಜಿಲ್ಲೆಯ ಪೈಕಿ ಅತೀ ಹೆಚ್ಚು ಜೆಡಿಎಸ್ ಮತದಾರರು ಇರುವ ಕ್ಷೇತ್ರ. ನಮ್ಮ ಅಭ್ಯರ್ಥಿ ಪ್ರತೀ ಮನೆಗಳಿಗೂ ಭೇಟಿ ನೀಡಿ ಪ್ರಚಾರ ಮಾಡಿದ್ದಾರೆ. ನೈತಿಕ ಸ್ಥೈರ್ಯ ಕಸಿದುಕೊಳ್ಳಲು ಯತ್ನ ನಡೆಯುತ್ತಿದ್ದು, ಇದಕ್ಕೆಲ್ಲಾ ನಮ್ಮ ಪಕ್ಷ ಜಗ್ಗುವುದಿಲ್ಲ ಅಂತ ಹೇಳಿದ್ದಾರೆ. ಇನ್ನೂ ಉತ್ಸಾಹದಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ.