ಲಕ್ನೋ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಪಕ್ಷದಿಂದ ಅಮಾನತುಗೊಂಡಿದದ್ದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರ ಶಿರಚ್ಛೇದನ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಾಸಿರ್‌ನನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸಲಾಗಿದ್ದು, ಆತ ನೂಪುರ್ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?
Advertisement
Advertisement
ನಾಸಿರ್ ಹುಸೇನ್ ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಹಾಗೂ ಕೋಮು ಉದ್ವಿಗ್ನತೆಗೆ ಪ್ರಚೋದಿಸಿದ್ದ. ಈ ಹಿನ್ನೆಲೆ ನಾವು ಆತನನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ
Advertisement
ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ ನೂಪುರ್ ಶರ್ಮಾ ಜಾಗತಿಕವಾಗಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಪಕ್ಷ ನೂಪುರ್‌ಅನ್ನು ಅಮಾನತುಗೊಳಿಸಿದ್ದು, ಅವರ ವಿರುದ್ಧ ಹಲವೆಡೆ ಎಫ್‌ಐಆರ್‌ಗಳು ದಾಖಲಾಗಿವೆ. ನೂಪುರ್ ಶರ್ಮಾ ವಿರುದ್ಧ ಜಾಗತಿಕವಾಗಿ ಆಕ್ರೋಶ ಹೊರಹೊಮ್ಮುತ್ತಿರುವ ನಡುವೆ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.