ಮಡಿಕೇರಿ: ಅಕ್ರಮವಾಗಿ ಗಾಂಜಾ (Drugs) ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ನಾಪೋಕ್ಲು ವ್ಯಾಪ್ತಿಯ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಅಸ್ಸಾಂ (Assam) ಮೂಲದ ಸೈಫುಲ್ ಇಸ್ಲಾಂ, ಅನಾರ್ ಹುಸೇನ್, ಜಹೀರ್ ಅಲಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಚರಂಡಿ ಮೂಲಕ 10 ಅಡಿ ಸುರಂಗ ಕೊರೆದು ಜ್ಯುವೆಲರಿ ಅಂಗಡಿಗೆ ಕನ್ನ
Advertisement
Advertisement
ನಾಪೋಕ್ಲು ಠಾಣಾ ಸರಹದ್ದಿನ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ನಾಪೋಕ್ಲು ಠಾಣಾ ಪಿಎಸ್‌ಐ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಅಲ್ಲದೇ ಅರೋಪಿಗಳನ್ನು ಬಂಧಿಸಿ 2.150 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೊಡಗು ಎಸ್.ಪಿ ರಾಜರಾಜನ್ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು
Advertisement