ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು (Leopard) ಅರಣ್ಯಾಧಿಕಾರಿಗಳಿಗೆ ತಿಳಿಸದೇ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು (Tumakuru) ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಚಿರತೆ ಸುಡುವ ವಿಡಿಯೋ ವೈರಲ್ ಆಗಿದ್ದು, ಮೂವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಗೌರಗೊಂಡನಹಳ್ಳಿಯ ಜಿ.ಡಿ.ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳು. ನಾರಾಯಣಪ್ಪನ ಹೊಲಕ್ಕೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಉರುಳು ಹಾಕಿದ್ದ. ಇತ್ತೀಚೆಗೆ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿತ್ತು. ಬಳಿಕ ಗ್ರಾಮಸ್ಥರು ಚಿರತೆಯನ್ನು ಸುಟ್ಟು ಹಾಕಿದ್ದರು. ಇದನ್ನೂ ಓದಿ: 2 ಲಕ್ಷ ಲಂಚ ಪಡೆಯುವಾಗ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಸತ್ತ ಚಿರತೆ ಸುಡುವುದನ್ನು ಗ್ರಾಮದ ಕೆಲವು ಯುವಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿಡಿಯೋ ಆಧರಿಸಿ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ

