– 20,000 ರೂ. ಮೌಲ್ಯದ ವಸ್ತು ವಶಕ್ಕೆ
ಕೋಲಾರ: ಸಿಇಎನ್ ಪೊಲೀಸರು (CEN Police) ಕಾರ್ಯಾಚರಣೆ ನಡೆಸಿ ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಸುಲ್ತಾನ್ ತಿಪ್ಪಸಂದ್ರ ನಿವಾಸಿಗಳಾದ ಸಮೀರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ ಬಂಧಿತ ಆರೋಪಿಗಳು. ಬಂಧಿತರಿಂದ 20,000 ಮೌಲ್ಯದ 5.4 ಗ್ರಾಂ ತೂಕದ ಎಂಡಿಎಂ ಮಾದಕ ಪದಾರ್ಥ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರೈತರಿಗೆ, ಬೆಂಗಳೂರಿಗರಿಗೆ ಸಿಹಿ ಸುದ್ದಿ – ಜನವರಿಯಲ್ಲೂ ಕೆಆರ್‌ಎಸ್ ಡ್ಯಾಂ ಭರ್ತಿ, ದಾಖಲೆ ನಿರ್ಮಾಣ
ಅಲ್ಲದೇ ಒಂದು ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಹಾಗೂ 1 ಡ್ರ್ಯಾಗರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೋಲಾರ ನಗರದ ಸುಲ್ತಾನ್ ತಿಪ್ಪಸಂದ್ರ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಶರಣಾದ ನಕ್ಸಲರಿಗೆ ಎಷ್ಟು ಹಣ ಸಿಗುತ್ತೆ? ಸರ್ಕಾರದ ಪ್ಯಾಕೇಜ್ ಎನು?