-11 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramya) ಅಶ್ಲೀಲ ಮೆಸೇಜ್ ಮಾಡಿದ್ದವರ ಪೈಕಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ಬೆಂಗಳೂರು ಪೊಲೀಸರ (Bengaluru Police) ಕಾರ್ಯಕ್ಕೆ ನಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನಟಿ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಪ್ಪು ಮಾಡಿದವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರ ಘನತೆಗೆ ಧಕ್ಕೆ ತಂದವರನ್ನು ಬಂಧಿಸುವ ಕೆಲಸ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬೆಂಗಳೂರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್ ಬಾಂಬ್
ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು.
ದೂರಿನ ಬಳಿಕ ಆರೋಪಿಗಳ ಪತ್ತೆಗಿಳಿದ ಪೊಲೀಸರು ಸದ್ಯ 11 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಹಾಗೂ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್ ಏರಿಕೆ – ಡ್ಯಾಂ ಕುಸಿತ