ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರ ಬಂಧನ – ಬಂದೂಕುಗಳು ವಶ

Public TV
0 Min Read
chamarajanagara three arrest

ಚಾಮರಾಜನಗರ: ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.

ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಬಂಧಿತರು. ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಇವರುಗಳನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್‌ಗಳು, ಕಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article