ಹಳೇ ವೈಷಮ್ಯ – ಮೂವರ ಮೇಲೆ ತಲ್ವಾರ್‌ ದಾಳಿ

1 Min Read

ಬೆಳಗಾವಿ: ಇಲ್ಲಿನ (Belagavi) ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ ದಾಳಿ ನಡೆಸಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿಗೊಳಗಾದವರನ್ನು ನಗರದ ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌


ಗಾಯಾಳುಗಳ ಕುಟುಂಬಸ್ಥರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Share This Article