ಹೈದರಾಬಾದ್: ಆಟವಾಡುತ್ತಿದ್ದ ಸಂದರ್ಭದಲ್ಲಿ ಮಕ್ಕಳ ಮೇಲೆ ಗೋಡೆ ಕುಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕೊಥಾಡೊಂಕಾದಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳು ಎಂಟು ವರ್ಷ ವಯಸ್ಸಿನವರಾಗಿದ್ದು, ನವದೀಪ್, ಮಣಿಕಾಂತ ಮತ್ತು ಪ್ರೇಮಚಂದ್ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ಗಾಯಗೊಂಡ ಹುಡುಗಿ ಪ್ರೇಮಚಂದ್ ಸಹೋದರಿ ಪ್ರೀತಿ ಜ್ಯೋತಿ ಎಂದು ತಿಳಿದುಬಂದಿದೆ.
Advertisement
Advertisement
ಗುರುವಾರ ಮಧ್ಯಾಹ್ನ ಮಕ್ಕಳು ಶಾಲೆಯಿಂದ ತಮ್ಮ ಮನೆಗೆ ಬಂದು ನಂತರ ಓಂಗೊಲ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋಡೆಯ ಪಕ್ಕ ಆಟವಾಡಲು ಹೋಗಿದ್ದರು. ಆದರೆ ಮಕ್ಕಳು ಆಟವಾಡುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ನವದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಣಿಕಾಂತ ಮತ್ತು ಪ್ರೇಮಚಂದ್ರ ಇಬ್ಬರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Advertisement
ಅವಘಡದಲ್ಲಿ ಪ್ರೀತಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
ಈ ಬಗ್ಗೆ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಗೋಡೆ ಕುಸಿತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದ್ದಾರೆ.