ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Advertisement
ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ ಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಚುಚ್ಚುಮದ್ದು ಪಡೆದು ಮಕ್ಕಳಿಬ್ಬರ ನಿಗೂಢ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
Advertisement
Advertisement
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜನವರಿ 13 ರಂದು 14 ತಿಂಗಳ ಮಧು ಚುಚ್ಚುಮದ್ದು ಪಡೆದಿದ್ದಳು. ಮಕ್ಕಳಿಗೆ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಸಿಬ್ಬಂದಿ ಚುಚ್ಚುಮದ್ದು ನೀಡಿದ್ದರು. ಬಳಿಕ ಮಗುವಿಗೆ ವಾಂತಿಬೇಧಿ ಕಾಣಿಸಿಕೊಂಡಿತ್ತು. ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.16 ರಂದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಧು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಮೆರಿಕ ನೆರವಿನಿಂದ ಮಹಿಳಾ-ಮಕ್ಕಳ ಆರೋಗ್ಯ ಕೇಂದ್ರ
Advertisement
ಮೂರು ದಿನಗಳ ಅಂತರದಲ್ಲಿ ಮೂವರು ಮಕ್ಕಳ ಸಾವು ಸಂಭವಿಸಿದೆ. ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಸಿಬ್ಬಂದಿಯಿಂದ ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳಿಗೆ ಚುಚ್ಚುಮದ್ದು ಹಾಗೂ ವಯಸ್ಕರಿಗೆ ಕೋವಿಡ್ ವ್ಯಾಕ್ಸಿನ್ ಒಂದೇ ಕೇಂದ್ರದಲ್ಲಿ ಅಕ್ಕಪಕ್ಕವಿಟ್ಟು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಇದೀಗ ಸಿಎಂ ಬೆಳಗಾವಿ ಡಿಸಿಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.