ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಮಾದಕದ್ರವ್ಯಗಳ ಕಳ್ಳಸಾಗಣೆ ಬಗ್ಗೆ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಇಬ್ಬರು ಐಪಿಎಸ್ ಅಧಿಕಾರಿಗಳು ಫೋನ್‍ನಲ್ಲಿ ಕ್ಯಾಂಡಿ ಕ್ರಶ್ ಗೇಮ್ ಆಡಿದ್ದು, ಮತ್ತೊಬ್ಬರು ವಾಟ್ಸಪ್ ನೋಡುತ್ತಿದ್ದ ಕಾರಣ ಅವರಿಗೀಗ ನೋಟಿಸ್ ನೀಡಲಾಗಿದೆ.
ಜೂನ್ 26ರಂದು ಬಿಹಾರದಲ್ಲಿ ಮಾದಕದ್ರವ್ಯಗಳ ಕಳ್ಳಸಗಣೆ ಹಾಗೂ ಅಪರಾಧ ಕೃತ್ಯಗಳ ಬಗ್ಗೆ ಚರ್ಚೆ ನಡೆಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ರು. ಬಿಹಾರದ ಪೊಲೀಸ್ ಮಹಾನಿರ್ದೇಶಕರು ಕೂಡ ಭಾಗಿಯಾಗಿದ್ರು. ಆದ್ರೆ ಈ ಕಾರ್ಯಕ್ರಮದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಮೊಬೈಲ್‍ನಲ್ಲಿ ಗೇಮ್ ಆಡುತ್ತಿದ್ದು, ಮತ್ತೊಬ್ಬ ಅಧಿಕಾರಿ ವಾಟ್ಸಪ್ ನೋಡುತ್ತಿದ್ದುದು ಕಂಡುಬಂದಿತ್ತು. ಈ ದೃಶ್ಯಗಳನ್ನ ಮಾಧ್ಯಮಗಳು ಪ್ರಸಾರ ಮಾಡಿದ್ದು, ಸಾಕಷ್ಟು ಸುದ್ದಿಯಾಗಿತ್ತು.
Advertisement
Advertisement
ಈ ಹಿನ್ನೆಲೆಯಲ್ಲಿ ಪಾಟ್ನಾ ಎಸ್‍ಎಸ್‍ಪಿ ಮನು ಮಹಾರಾಜ್, ಸಿಟಿ ಎಸ್‍ಪಿ ಚಂದನ್ ಕುಮಾರ್ ಕುಶ್ವಾಹಾ ಹಾಗೂ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ರಾಜ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಕೂಡಲೇ ವಿವರಣೆ ನೀಡುವಂತೆ ಅಧಿಕಾರಿಗಳಿಗೆ ಕೇಳಲಾಗಿದೆ.
Advertisement
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಇಲ್ಲಿನ ಸಹಾಯಕ ಪೊಲೀಸ್ ಮಹಾನಿರ್ದೇಶಕರಾದ ಎಸ್‍ಕೆ ಸಿಂಗಲ್, ಹಿರಿಯ ಪೊಲೀಸ್ ಅಧಿಕಾರಿಗಳಿಂದ ಈ ರೀತಿಯ ವರ್ತನೆ ನಿರೀಕ್ಷಿಸುವುದಿಲ್ಲ. ನಾವು ಅವರನ್ನು ಕೌನ್ಸೆಲಿಂಗ್ ಮಾಡುತ್ತೇವೆ ಎಂದಿದ್ದಾರೆ.