ರಾಮನಗರ: ಮಂಡ್ಯ ಜಿಲ್ಲೆಯ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟದ ಹಿನ್ನೆಲೆಯಲ್ಲಿ ರಾಮನಗರ- ಚನ್ನಪಟ್ಟಣ ನಗರಗಳಿಗೆ ಕುಡಿಯುವ ನೀರನ್ನು ಬಂದ್ ಮಾಡಿ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಘಟಕದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇಂದಿನಿಂದ 3 ದಿನಗಳ ಕಾಲ 23 ರಿಂದ 24, 25ರ ವರೆಗೆ ಎರಡು ನಗರಗಳಿಗೂ ಕುಡಿಯುವ ನೀರು ಬಂದ್ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಹಲಗೂರು ಸಮೀಪದ ತೊರೆಕಾಡನಹಳ್ಳಿಯಲ್ಲಿ ಶಿಂಷಾ ನದಿಯ ನೀರನ್ನು ಶುದ್ಧೀಕರಿಸಿ ಎರಡು ನಗರಗಳಿಗೆ ಕುಡಿಯಲು ಸರಬರಾಜು ಮಾಡಲಾಗುತ್ತಿತ್ತು.
Advertisement
Advertisement
ಕಳೆದ 21ರಂದು ಮಂಡ್ಯದ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯ ಸ್ಪೆಂಟ್ ವಾಷ್ ಸ್ಟೋರೇಜ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಶಿಂಷಾ ನದಿಗೆ 40 ರಿಂದ 50 ಲಕ್ಷ ಲೀಟರ್ ರಾಸಾಯನಿಕ ತ್ಯಾಜ್ಯ ನೀರು ಸೇರಿದೆ. ಈ ಹಿನ್ನೆಲೆಯಲ್ಲಿ ಎರಡೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಿರುವುದಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಘಟಕದ ಚನ್ನಪಟ್ಟಣ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆದೇಶ ಹೊರಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv