ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ (Renukaswamy Murder Case) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ (Darshan) ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನ 1:15ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ 17 ಆರೋಪಿಗಳು ಕೂಡ ವಿಚಾರಣೆ ಹಾಜರಾಗಿದ್ದರು. ಬಳ್ಳಾರಿ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ಗೆ ಆರೋಪಿ ದರ್ಶನ್ ಬಂದಿದ್ದರು. ಇದನ್ನೂ ಓದಿ: ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಪಂಗನಾಮ ಹಾಕಿದ ಖದೀಮರು
Advertisement
Advertisement
ಪ್ರಕರಣದ ಹಾರ್ಡ್ಡಿಸ್ಕ್, ಪೆನ್ಡ್ರೈವ್ ಎಲ್ಲವನ್ನೂ ಕೋರ್ಟ್ಗೆ ಎಸ್ಪಿಸಿ ಪ್ರಸನ್ನಕುಮಾರ್ ಸಲ್ಲಿಕೆ ಮಾಡಿದರು. ಡಿಜಿಟಲ್ ಎವಿಡೆನ್ಸ್ 2 ವಾರದಲ್ಲಿ ಕೊಡುವುದಾಗಿ ತಿಳಿಸಿದರು.
Advertisement
ವಿಚಾರಣೆ ವೇಳೆ, ಜೈಲಿಗೆ ಚಾರ್ಜ್ಶೀಟ್ ಕಳಿಸುತ್ತೇವೆ ಎಂದು ಎಸ್ಪಿಸಿ ಪ್ರಸನ್ನಕುಮಾರ್ ಕೋರ್ಟ್ಗೆ ಮನವಿ ಮಾಡಿದರು. ಆದರೆ ಆರೋಪಿಗಳ ಪರ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ರಾತ್ರಿ ಡ್ಯೂಟಿ ವೇಳೆ ಹಾಲು ಕದ್ದ ಪೊಲೀಸ್ ಪೇದೆ – ವೀಡಿಯೋ ವೈರಲ್
Advertisement
ನ್ಯಾಯಾಧೀಶರು ಆರೋಪಿಗಳ ಬಳಿಯೇ ವಕೀಲರ ಹೆಸರು ಕೇಳಿದರು. ಸಿ.ವಿ.ನಾಗೇಶ್ ನನ್ನ ಪರ ಹಾಜರಾಗ್ತಾ ಇದ್ದಾರೆ ಎಂದು ದರ್ಶನ್ ತಿಳಿಸಿದರು. ಉಳಿದ ಆರೋಪಿಗಳು ತಮ್ಮ ಪರ ವಾದ ಮಂಡಿಸುವ ವಕೀಲರ ಹೆಸರು ಹೇಳಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿತು.