ರಾಯಚೂರು: ಇಲ್ಲಿನ ನಗರಸಭೆ ಸರಬರಾಜು ಮಾಡಿದ್ದ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನೂರಾರು ಮಂದಿ ಆಸ್ಪತ್ರೆಗೆ ದಾಖಲಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಗರಸಭೆಯ ಅವ್ಯವಸ್ಥೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಅಧಿಕಾರಿಗಳ ತನಿಖಾ ತಂಡವನ್ನು ನೇಮಿಸಿದೆ.
Advertisement
ಕಲುಷಿತ ನೀರು ಸೇವನೆಯಿಂದ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ತನಿಖೆ ನಡೆಸಲು ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, 3 ದಿನಗಳಲ್ಲಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್. ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನಗರಸಭೆಯಿಂದ ಕಲುಷಿತ ನೀರು ಸರಬರಾಜು- ಮಹಿಳೆ ಸಾವು, ನೂರಕ್ಕೂ ಹೆಚ್ಚು ಜನ ಅಸ್ವಸ್ಥ
Advertisement
Advertisement
ತನಿಖಾ ಸಮಿತಿಗೆ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಕಲಬುರಗಿಯ ನಗರ ನೀರು ಸರಬರಾಜು ಮಂಡಳಿಯ ಮುಖ್ಯ ಅಭಿಯಂತರರನ್ನು ನೇಮಕ ಮಾಡಲಾಗಿದೆ. ಸಮಿತಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ 3 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ. ಇದನ್ನೂ ಓದಿ: ಕಲುಷಿತ ನೀರಿಗೆ ಮೂರನೇ ಬಲಿ – ರಾಯಚೂರು ಬಂದ್‌ಗೆ ಕರೆ
Advertisement
ಜೂನ್ 7 ರಂದು ತನಿಖಾ ಸಮಿತಿ ರಾಯಚೂರಿಗೆ ಆಗಮಿಸಲಿದ್ದು ನಗರಸಭೆ ಕಚೇರಿ, ಜಲ ಶುದ್ಧೀಕರಣ ಘಟಕ ಸೇರಿ ವಿವಿಧೆಡೆ ಭೇಟಿ ನೀಡಿ ವರದಿ ತಯಾರಿಸಲಿದೆ. ಈ ಹಿನ್ನೆಲೆ ಜಿಲ್ಲಾ ನಗರಾಭಿವೃದ್ಧಿ ಕೋಶದ, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕಾರ್ಯಪಾಲಕ ಅಭಿಯಂತರರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ.