ಬೀದರ್: ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದಾರುಣ ಸಾವಿಗೀಡಾಗಿರುವ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ. ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ಅಪಘಾತವಾಗಿದೆ.
ಪತಿ ವೆಂಕಟ್ ಕರಟ್ಮಲ್ (40), ಪತ್ನಿ ಶಿಲ್ಪಾ (35), ಮಗಳು ರಕ್ಷಿತಾ (12) ಮೃತ ದುರ್ದೈವಿಗಳು. ಇವರು ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದವರು. ಮಗ ದಿಗಂಬರ್ (15) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ಕುಟುಂಬ ಸಮೇತ ಬೀದರ್‌ಗೆ ಹೋಗಿ ವಾಪಸ್ ರಾಜೇಶ್ವರ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಬೀದರ್‌ನಲ್ಲಿರುವ ಸೋದರ ಅಳಿಯನ ಮಗಳನ್ನ ಮಾತನಾಡಿಸೋಕೆ ಬಂದಿದ್ದರು. ವಾಪಸ್ ಆಗುವಾಗ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಹಳ್ಳಿಖೇಡ-ಬಿ ಪಟ್ಟಣದ ಶವಾಗಾರದಲ್ಲಿ ದಂಪತಿ & ಮಗಳ ಮೃತದೇಹ ಇಡಲಾಗಿದೆ. ಬ್ರಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

