ನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ – ತನಗೆ ಐಪಿಎಲ್ ಟಿಕೆಟ್ ಬೇಡ ಎಂದ ಸುರೇಶ್ ಕುಮಾರ್
ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಮೂವರು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

