ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ. ಈರನಗೌಡ ಅವರು ಆರು ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈ ಸಾಲ ಸೇರಿದಂತೆ 20 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಮತ್ತು ಹತ್ತಿ ಮಳೆ ಬಾರದೇ ಕೈ ಕೊಟ್ಟಿದ್ದರಿಂದ ಇಂದು ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯ ರೈತ ರುದ್ರೇಗೌಡ (58) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರೇಗೌಡ ಅವರು ಬ್ಯಾಂಕ್ ಮತ್ತು ಕೈ ಸಾಲ ಸೇರಿದಂತೆ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಜಮೀನು ಬಳಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ, ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಇನ್ನೂ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದ ಯುವ ರೈತ ಮಧುಕುಮಾರ್ (23) ಮಂಗಳವಾರ ರಾತ್ರಿ ವಿಷ ಸೇವಿಸಿದದ್ರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಮಧುಕುಮಾರ್ ಒಂದೂವರೆ ಎಕರೆ ಭೂಮಿಯಲ್ಲಿ ಭತ್ತ ಬೆಳದಿದ್ದರು. ಇತ್ತೀಚಿಗೆ ಜಮೀನಿನಲ್ಲಿ ಕೊರಸಿದ್ದ ಬೋರವೆಲ್‍ನಲ್ಲಿ ನೀರು ಬಂದಿರಲಿಲ್ಲ. ಮಧುಕರ್ ಬೇಸಾಯಕ್ಕೆಂದು ಎರಡೂವರೆ ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.