ಬಳ್ಳಾರಿ/ವಿಜಯನಗರ: ಮೀನು ಹಿಡಿಯಲು ತುಂಗಭದ್ರಾ ನದಿಗೆ (Tungabhadra River) ತೆರಳಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ಹೋಗಿದ್ದವರು ಮನೆಗೆ ವಾಪಸ್ ಬಾರದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದಾರೆ.
ನಾಪತ್ತೆಯಾದವರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ. ಮೂವರು ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ.
ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ. ಬಳಿಕ ಮೂವರು ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಎಸ್‌ಡಿಆರ್‌ಎಫ್ ತಂಡವೂ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ. ಇದನ್ನೂ ಓದಿ: ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ
ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಇಮಿಗ್ರೇಷನ್ ಸರತಿಗೆ ಗುಡ್‌ಬೈ – ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್’ ಎಂದರೇನು? ಯಾರಿಗೆ ಸಿಗುತ್ತೆ?

