ಹೈದರಾಬಾದ್: ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಮೂರು ವಜ್ರಖಚಿತ ಚಿನ್ನದ ಕಿರೀಟಗಳು ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ತಿರುಪತಿ ತಿರುಮಲ ದೇವಸ್ಥಾನ(ಟಿಟಿಡಿ) ಅಧೀನದಲ್ಲಿ ಬರುವ ಈ ದೇವಸ್ಥಾನದಲ್ಲಿ ಶನಿವಾರ ಸಂಜೆ 5.45ರ ಸುಮಾರಿಗೆ ಅರ್ಚಕರು ಬಾಗಿಲು ಓಪನ್ ಮಾಡಿದ ವೇಳೆ ಕಿರೀಟಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
Advertisement
ದೇವಸ್ಥಾನದ ಪೂಜಾ ಕಾರ್ಯಗಳು ಹಾಗೂ ಭಕ್ತರ ದರ್ಶನದ ಬಳಿಕ ಅಂದ್ರೆ 5 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗಿತ್ತು. ನಂತರ 45 ನಿಮಿಷ ಬಿಟ್ಟು ಮತ್ತೆ ಪೂಜಾ ಕಾರ್ಯಗಳಿಗಾಗಿ ದೇವಸ್ಥಾನದ ಬಾಗಿಲು ತೆರೆದ ವೇಳೆ ಕಿರೀಟಗಳು ನಾಪತ್ತೆಯಾಗಿದ್ದವು ಎಂದು ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಭಾಸ್ಕರ್ ತಿಳಿಸಿದ್ದಾರೆ.
Advertisement
Advertisement
ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ರವಾನಿಸಿದ್ದು, ಕೂಡಲೇ ಕಾರ್ಯನಿರ್ವಹಣಾಧಿಕಾರಿ, ಮುಖ್ಯಸ್ಥ ಮತ್ತಿತರರು ದೇವಸ್ಥಾನಕ್ಕೆ ರಾತ್ರಿಯೇ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಈ ಬಗ್ಗೆ ದೇವಸ್ಥಾನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೇವಸ್ಥಾನದ ಸಿಬ್ಬಂದಿಯನ್ನು ಕೂಡ ತನಿಖೆ ನಡೆಸಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv