ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಬಂಧಿತ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು – ಬ್ಯಾಂಕ್ ವಂಚನೆ ಕೇಸ್‌ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು
Advertisement
Advertisement
ವಿಷಯ ತಿಳಿದ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.
Advertisement
ಮೊದಲು ಒಬ್ಬ ಶಿಕ್ಷಕ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಷಯದ ತಿಳಿದ ಇನ್ನುಳಿದ ಇಬ್ಬರು ಶಿಕ್ಷಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್ ಪಾಸ್
Advertisement
ಸಂತ್ರಸ್ತೆಯನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ದಿನೇಶ್ ಕುಮಾರ್ ತಿಳಿಸಿದ್ದಾರೆ. ಇತ್ತ ಪ್ರಕರಣ ದಾಖಲಿಸುತ್ತಿದ್ದಂತೆ ಕೃಷ್ಣಗಿರಿ ಜಿಲ್ಲಾ ಪ್ರಧಾನ ಶಿಕ್ಷಣಾಧಿಕಾರಿಗಳು ಮೂವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಕ್ರೀಡೆಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಆದೇಶಕ್ಕೆ ಟ್ರಂಪ್ ಸಹಿ