ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ (Mangaluru) ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹಾನಗಲ್ ಕಾರಹುಣ್ಣಿಮೆ ವೇಳೆ ಗಲಾಟೆ; 24 ಹಿಂದೂಗಳು, 26 ಮುಸ್ಲಿಂ ಯುವಕರ ವಿರುದ್ಧ ಕೇಸ್ ದಾಖಲು
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
