ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಗರದ ಯಶವಂತಪುರದ ತ್ರಿವೇಣಿ ರೋಡ್‍ನಲ್ಲಿ ನಡೆದಿದೆ.
ಇಂದು ಸಂಜೆ ಗ್ಯಾಸ್‍ನ ಕ್ಯಾಪ್ ತೆಗೆಯುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಮಗು ಸೇರಿ ಮೂವರು ಗಂಭೀರ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಫ್ರಿಡ್ಜ್ ಸೇರಿ ಪೀಠೋಪಕರಣ ಧ್ವಂಸವಾಗಿದೆ. ಗಾಯಾಳುಗಳನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಸಿಲಿಂಡರ್ ಮೇಲಿನ ಕ್ಯಾಪ್ ತೆಗೆದ ರಭಸಕ್ಕೆ ಟ್ಯಾಂಕ್‍ನಲ್ಲಿದ್ದ ಗ್ಯಾಸ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಶವಂತಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews