ಗದಗ: ದೇವಸ್ಥಾನ ಮತ್ತು ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ (Gold Theft) ಮಾಡುತ್ತಿದ್ದ ಮೂವರು ಅಂತರರಾಜ್ಯ ಕಳ್ಳರನ್ನು ಗದಗ (Gadag) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ದಕ್ಷಿಣ ಕನ್ನಡದ ಮಹಮ್ಮದ್ ರಫಿಕ್, ಬೆಳಗಾವಿಯ ಇಮ್ರಾನ್ ತಿಗಡಿ ಹಾಗೂ ಹಾವೇರಿ ಮೂಲದ ಮೌಲಾಅಲಿ ದರ್ಗಾ ಎಂದು ಗುರುತಿಸಲಾಗಿದೆ.
ಈ ಮೂವರು ಗದಗ-ಬೆಟಗೇರಿ ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನ ನಡೆಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಗದಗ ನಗರದ ಉದಯ ಬಡಾವಣೆಯ ಬಸವ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಆರೋಪಿಗಳನ್ನು ಬಂಧಿಸಿ, ಅವರಿಂದ 342 ಗ್ರಾಂ ಚಿನ್ನ, 1,970 ಗ್ರಾಂ ಬೆಳ್ಳಿ, 8 ಲಕ್ಷ ರೂ. ನಗದು ಸೇರಿದಂತೆ ಒಟ್ಟು 42.73 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರಲ್ಲಿ ಪ್ರಮುಖ ಆರೋಪಿ ಮಹಮ್ಮದ್ ರಫಿಕ್ ವಿರುದ್ಧ ಈಗಾಗಲೇ 68 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಸ್ಥಳೀಯ ಕಳ್ಳರ ಸಹಾಯದಿಂದ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಆತ, 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಬಿಐ ಬ್ಯಾಂಕ್ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದ. ಆ ಪ್ರಕರಣದಲ್ಲಿ ಸುಮಾರು 3 ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ.ಇದನ್ನೂ ಓದಿ: ಸಿಜೆಪಿಯ 3 ಬೇಡಿಕೆಗಳಿಗೆ ಒಪ್ಪಿದ ಕೇಂದ್ರ – ದೆಹಲಿಯಲ್ಲಿ ನಡೆಯುತ್ತಿದ್ದ GenZ ಪ್ರತಿಭಟನೆ ಅಂತ್ಯ
ಜೈಲಿನಲ್ಲಿ ಪರಿಚಯವಾದ ಇತರ ಆರೋಪಿಗಳ ಜೊತೆ ಸೇರಿ ಹೊಸ ಹೊಸ ಪ್ರದೇಶಗಳಲ್ಲಿ ಕಳ್ಳತನ ನಡೆಸುತ್ತಿದ್ದ ಈ ಖತರ್ನಾಕ್ ಗ್ಯಾಂಗ್‌ನ್ನು ಗದಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್ಪಿ ರೋಹನ್ ಜಗದೀಶ್ ಅವರು ಅಭಿನಂದಿಸಿ, ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.ಇದನ್ನೂ ಓದಿ: ‘ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು’ – ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ
