ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ (Uttara Pradesh Road Accident) ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. 50-60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದ ನಂತರ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿತು. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಅಗ್ನಿಶಾಮಕ ಇಲಾಖೆಯ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡು ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.ಇದನ್ನೂ ಓದಿ: ದೀಪಾವಳಿ ಸಂಭ್ರಮದಲ್ಲಿ ಅವಘಡ – ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ಪ್ರಕರಣ
