
ಬೆಳಗಾವಿ: ಕಾರೊಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.
Advertisements
ಮುಜಾಹಿದ್ ದೇಸಾಯಿ, ಅಬ್ದುಲ್ರಜಾಕ್ ಪಟೇಲ್ ಹಾಗೂ ಕಲೀಮುನ ಪಟೇಲ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಗಳು. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಕರೋಶಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
Advertisements
ಮೃತರು ಬೆಳಗಾವಿಯಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಕರೋಶಿ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಎದುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಮೇಲೆ ಇದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Advertisements
Advertisements