ನವದೆಹಲಿ: ದೆಹಲಿಯ ಹೊರವಲಯದಲ್ಲಿರುವ ಸಿಎನ್‌ಜಿ ಸ್ಟೇಷನ್‌ನಲ್ಲಿ ಇಂದು (ಬುಧವಾರ) ಸಂಭವಿಸಿದ ಸ್ಫೋಟದಲ್ಲಿ (CNG Station Blast) ಕನಿಷ್ಠ ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ.
ಟಿಕ್ರಿ ಕಲಾನ್ ಮೆಟ್ರೋ ನಿಲ್ದಾಣದ (Tikri Kalan Metro Station) ಬಳಿಯ ಸಿಎನ್‌ಜಿ ಪಂಪ್ ನಿಲ್ದಾಣದಲ್ಲಿ ಇಂಧನ ತುಂಬಿಸುವ ಟ್ರಕ್‌ನಿಂದ ಅನಿಲ ತುಂಬಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಮಧ್ಯಾಹ್ನ 3:37 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಮೃತರಲ್ಲಿ ಓರ್ವನನ್ನ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ (25) ಎಂದು ಗುರುತಿಸಲಾಗಿದೆ. ಬಸ್‌ಗೆ ಸಿಎನ್‌ಜಿ ತುಂಬಿಸುವಾಗ ಸ್ಫೋಟ ಸಂಭವಿಸಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಫೋಟದ ನಂತರ ಸಿಎನ್‌ಜಿ ಸ್ಟೇಷನ್‌ನಲ್ಲಿ ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮಿದೆ, ದಟ್ಟ ಹೊಗೆ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

