ಮೈಸೂರು: ಇಟ್ಟಿಗೆಗೂಡು (Brick Kiln) ಕುಸಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆ ಟಿ.ನರಸೀಪುರ (T.Narasipura) ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ನಡೆದಿದೆ.
ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35), ನಾರಾಯಣ್ (40) ಮೃತ ದುರ್ದೈವಿಗಳು. ಇಟ್ಟಿಗೆಗೂಡಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಗೂಡು ಕುಸಿದು ಅದರೊಳಗೆ ಸಿಲುಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಅಬ್ಬರದ ಮಳೆ – ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ, ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಟೋಗೆ ಕಾರು ಡಿಕ್ಕಿ – ರಸ್ತೆಬದಿ ನಿಂತಿದ್ದ 5 ವರ್ಷದ ಬಾಲಕ ದುರ್ಮರಣ, 6 ಕುರಿಗಳು ಸಾವು
