ಗ್ಯಾಂಗ್ಟಕ್: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ (North Sikkim) ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ ಛಾತೆನ್ನಲ್ಲಿ (Landslide at Chaten) ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು (Soldiers) ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್
ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಅವರ ಮೃತದೇಹಗಳು ಪತ್ತೆಯಾಗಿವೆ. ರಕ್ಷಿಸಲಾದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?
ಸಿಕ್ಕಿಂನಲ್ಲಿ ನಿರಂತರ ಮಳೆಯಿಂದ ಮತ್ತಷ್ಟು ಭೂಕುಸಿತವಾಗುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಸೇನೆ ಕಳವಳ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿರುವ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಇದನ್ನೂ ಓದಿ: ಅಸ್ಸಾಂ | ಹಠಾತ್ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ