ಮನಿಲಾ: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕ್ವಿಜಾನ್ ಸಿಟಿ ಪೊಲೀಸ್ ಜಿಲ್ಲಾ ನಿರ್ದೇಶಕ ರೆಮುಸ್ ಮದೀನಾ ಈ ಕುರಿತು ಮಾಹಿತಿ ನೀಡಿದ್ದು, ಕ್ವಿಜಾನ್ ನಗರದ ಅಟೆನಿಯೊ ಡಿ ಮನಿಲಾ ವಿಶ್ವವಿದ್ಯಾಲಯದ ಗೇಟ್ ಬಳಿ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಹಂತಕ ಗೇಟ್ ಬಳಿಯಿದ್ದ ವಾಚ್‍ಮ್ಯಾನ್‍ನನ್ನು ಕೊಂದು ಒಳಗೆ ಬಂದಿದ್ದಾನೆ. ವಿಶ್ವವಿದ್ಯಾಲಯದಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್
ಪ್ರಸ್ತುತ ಶೂಟರ್ ಕಾರನ್ನು ವಶಪಡಿಸಿಕೊಂಡಿದ್ದು, ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಪೊಲೀಸರು ಅವನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸಂತ್ರಸ್ತರಿಗೆ ಸಹಾಯ ಮಾಡಲು ರಾಷ್ಟ್ರೀಯ ತನಿಖಾ ಏಜೆಂಟರನ್ನು ಸಹ ಕ್ಷೇತ್ರಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ವಿಶ್ವವಿದ್ಯಾಲಯದ ಮುಖ್ಯಸ್ಥರು ಘಟನೆ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದು, ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅಲೆಕ್ಸಾಂಡರ್ ಗೆಸ್ಮುಂಡೊ ಅವರು ಭಾನುವಾರ ಮಧ್ಯಾಹ್ನ ಕಾನೂನು ಶಾಲೆಯ ಪದವಿ ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಗುಂಡಿನ ದಾಳಿ ನಡೆದ ಪರಿಣಾಮ ಕಾರ್ಯಕ್ರಮ ರದ್ದಾಯಿತು. ಪ್ರಸ್ತುತ ನಮ್ಮ ಕ್ಯಾಂಪಸ್ ಲಾಕ್‍ಡೌನ್‍ನಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ
ಸುಪ್ರೀಂ ಕೋರ್ಟ್ ವಕ್ತಾರ ಬ್ರಿಯಾನ್ ಹೊಸಾಕಾ ಈ ಕುರಿತು ಮಾತನಾಡಿದ್ದು, ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಯುವ ಸಂದರ್ಭದಲ್ಲಿ ಗೆಸ್ಮುಂಡೊ ಅವರು ವಿಶ್ವವಿದ್ಯಾಲಯಕ್ಕೆ ಹೋಗುತ್ತಿದ್ದರು. ಆದರೆ ವಿಷಯ ತಿಳಿದ ತಕ್ಷಣ ಹಿಂತಿರುಗಲು ಸಲಹೆ ನೀಡಲಾಯಿತು ಎಂದು ವಿವರಿಸಿದ್ದಾರೆ.