ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಲ್ಲಿ ದಿನೇ ದಿನೇ ಖೋಟಾನೋಟು ಹಾವಳಿ ಹೆಚ್ಚಾಗುತ್ತಿದ್ದು, ಇಂದು ಸಹ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಹಾಗೂ ನಾಯಕನಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ನೆಲಮಂಗಲದ ಬಳಿ ಸುಮಾರು 6.84 ಲಕ್ಷ ರೂಪಾಯಿ ಮೌಲ್ಯದ ಖೋಟಾನೋಟನ್ನು ವಶಪಡಿಸಿಕೊಂಡಿದ್ದಾರೆ.
Advertisement
ನಗರದ ಹೊರವಲಯವಾದ ನೆಲಮಂಗಲದ ಸುತ್ತ-ಮುತ್ತ ಅಸಲಿ ನೋಟಿನಂತೆ ಕಾಣುವ 2 ಸಾವಿರ ಮುಖಬೆಲೆಯ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ಖಚಿತ ಮಾಹಿತಿ ಮೇರೆಗೆ ಎನ್‍ಐಎ ಹಾಗೂ ಮಾದನಾಯಕನಹಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಖೋಟಾನೋಟು ಚಲಾವಣೆಯಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಬಂಧಿತರಿಂದ 2 ಸಾವಿರ ಮುಖಬೆಲೆಯ ಸುಮಾರು 6 ಲಕ್ಷದ 84 ಸಾವಿರ ರೂಪಾಯಿ ಮೌಲ್ಯದ ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತಿದ್ದು, ಇವರು ಖೋಟಾನೋಟು ದಂಧೆಯಲ್ಲಿ ಸಕ್ರಿಯವಾಗಿ ನಿರತರಾಗಿದ್ದಾರೆ. ಅಲ್ಲದೇ ಸಾಕಷ್ಟು ಬಾರಿ ಖೋಟಾನೋಟು ಪ್ರಕರಣದಲ್ಲಿ ಜೈಲಿಗೆ ಸಹ ಹೋಗಿ ಬಂದಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದು, ಘಟನೆ ಸಂಬಂಧ ನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews