ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುಗ ಆಘಾತಕಾರಿ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ.
ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಪುತ್ರ ಭರತ್ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ರಮೇಶ್ ಕೊನೆಯುಸಿರು
ದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]