– ಮೂವರಿಗೆ ಗಂಭೀರ ಗಾಯ
ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನಲ್ಲಿರುವ ಹುಳಿಯಾರು (Huliyaru) ಬಳಿಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರು ಆಂಧ್ರಪ್ರದೇಶ ಮೂಲದವರು. ತಂದೆ – ತಾಯಿ, ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಓಮಿನಿ ಕಾರಿನಲ್ಲಿ ಬರುತ್ತಿದ್ದರು. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ – ದೀದಿ ವಿರುದ್ಧ ಎಫ್‌ಐಆರ್
ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ನಾಳೆ ಅಣ್ಣಾಮಲೈ ಗುಡ್‌ಬೈ – ಚೆನ್ನೈನಲ್ಲಿ ಸುದ್ದಿಗೋಷ್ಠಿ ಕರೆದ ʻಸಿಂಗಂʼ













