ಶಿವಮೊಗ್ಗ: ಕಾರು (Car) ಹಾಗೂ ಬೈಕ್ (Bike) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮಗು ಸೇರಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿನಕೊಪ್ಪ ಬಳಿ ನಡೆದಿದೆ.
Advertisement
ಅಪಘಾತದಲ್ಲಿ ಮೃತಪಟ್ಟವರನ್ನು ಹಲುಗಿನಕೊಪ್ಪ ಗ್ರಾಮದ ನಿವಾಸಿಗಳಾ ಜ್ಯೋತಿ (30), ಗಂಗಮ್ಮ (50) ಸೌಜನ್ಯ (4) ಎಂದು ಗುರುತಿಸಲಾಗಿದೆ. ಭಾನುವಾರ ತಡ ರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ – ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ
Advertisement
ಮಲ್ಲಿಕಾರ್ಜುನ, ಮಗಳು ಸೌಜನ್ಯ, ಪತ್ನಿ ಜ್ಯೋತಿ ಹಾಗು ತಾಯಿ ಗಂಗಮ್ಮ ನಾಲ್ಕು ಮಂದಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು. ಕಾರು ಹೀರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತಿತ್ತು. ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
Advertisement
Advertisement
ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಶಿಕಾರಿಪುರ ಆಸ್ಪತ್ರೆಗೆ ಸಾಗಿಸಲಾಗುತಿತ್ತು ಚಿಕಿತ್ಸೆ ಫಲಿಸದೇ ಗಂಗಮ್ಮ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ಯೋತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗುತಿತ್ತು. ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸರು (Shiralakoppa Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.