ಬೆಂಗಳೂರು: ಸಚಿವ ಸಂಪುಟ ಪುನರ್‌ಚನೆ (Cabinet Reshuffle) ವದಂತಿ ಬೆನ್ನಲ್ಲೇ ಮೂವರು ಸಚಿವರು ಬ್ರೇಕ್‌ಫಾಸ್ಟ್ ಮೀಟಿಂಗ್ (Breakfast Meeting) ಮಾಡಿದ್ದಾರೆ.
ಸಚಿವರಾದ ಪರಮೇಶ್ವರ್, ಸತೀಶ್ ಜಾರಕಿಹೊಳಿ ಮಹದೇವಪ್ಪನವರು ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸಭೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಸಚಿವರಿಗೆ ಡಿನ್ನರ್ ಸಭೆ ನಡೆಸುವ ಮೊದಲೇ ಮೂವರು ಸಭೆ ನಡೆಸಿದ್ದು ಮಹತ್ವ ಪಡೆದಿದೆ.
ಸಿಎಂ ಸಿದ್ದರಾಮಯ್ಯ ಅ.13ರ ರಾತ್ರಿ ಸಚಿವರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆಯಲಿರುವ ಡಿನ್ನರ್ ಸಭೆಗೆ ಸಚಿವರನ್ನ ಊಟಕ್ಕೆ ಆಹ್ವಾನಿದ್ದಾರೆ. ಡಿನ್ನರ್ ಮೀಟಿಂಗ್ ನೆಪದಲ್ಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ.
ಈ ವರ್ಷದ ಆರಂಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿನ್ನರ್ ಮೀಟಿಂಗ್ ನಡೆದಿತ್ತು. ಸಿಎಂ ಆಪ್ತರ ಜೊತೆ ನಡೆಸಿದ ಮೀಟಿಂಗ್ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿತ್ತು. ಆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದರು.