Connect with us

Latest

ಒಬ್ಬ ಬಾಲಕ, ಇಬ್ಬರು ಬಾಲಕಿಯರು ಒಂದೇ ಮರಕ್ಕೆ ನೇಣು ಹಾಕ್ಕೊಂಡ್ರು!

Published

on

ಜೈಪುರ: ಸಂಶಯಾಸ್ಪದ ರೀತಿಯಲ್ಲಿ ಮೂವರು ಅಪ್ರಾಪ್ತರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.

ಮುಸ್ಲಿಂ ಬಾಲಕ ದೇಶಾಲ್ ಖಾನ್(17), ಶಾಂತಿ(13) ಮತ್ತು ಮಧು(12) ಆತ್ಮಹತ್ಯೆಗೆ ಶರಣಾದ ಅಪ್ರಾಪ್ತರು. ಶನಿವಾರ ಬೆಳಗ್ಗೆ ಮೂವರು ಮನೆ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಜಾನೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದನ್ನು ಸ್ಥಳೀಯರು ನೋಡಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ನೆರೆಹೊರೆಯವರನ್ನು ವಿಚಾರಣೆ ನಡೆಸಿದ್ದಾರೆ. ಇಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಶಾಂತಿ ತಂದೆ ಭೈರು ಮೆಗ್ವಾಲ್ ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಮುಸ್ಲಿಂ ಬಾಲಕ ಕೆಟ್ಟವನು ಎಂಬ ಅಭಿಪ್ರಾಯ ಬಂದಿದೆ. ಅಷ್ಟೇ ಅಲ್ಲದೇ ಈ ಮೂವರ ಮಧ್ಯೆ ಪ್ರೀತಿಯ ಸಂಬಂಧವಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ದೇಶಾಲ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಆದ್ದರಿಂದ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ. ಆತ್ಮಹತ್ಯೆಯ ಸ್ಥಳದಲ್ಲಿ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆ ಮತ್ತು ಇತರ ವೈದ್ಯಕೀಯ ವರದಿಗಳಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ ಅಂತಾ ಬಾರ್ಮರ್ ಪೊಲೀಸರು ತಿಳಿಸಿದ್ದಾರೆ.

ಇದೀಗ ಆತ್ಮಹತ್ಯೆ ಪ್ರಕರಣ ಎರಡು ಸಮುದಾಯದ ಬಗ್ಗೆ ಅನೇಕ ಪ್ರಶ್ನೆಗಳು ಮೂಡಿಬರುತ್ತಿದೆ. ಆದರೆ ಯಾವ ಪ್ರಶ್ನೆಗಳಿಗೂ ಉತ್ತರವಿಲ್ಲ. ಎರಡು ಸಮುದಾಯದವರು ಸತ್ಯವನ್ನು ಹೇಳುತ್ತಿಲ್ಲ. ಆದ್ದರಿಂದ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.