Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

Crime

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

Public TV
Last updated: December 22, 2022 3:19 pm
Public TV
Share
3 Min Read
HASSAN WOMAN DEATH
SHARE

ಹಾಸನ: ವರದಕ್ಷಿಣೆ (Dowry) ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ನಡೆದಿದೆ.

ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು (Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಮೇ 28ರಂದು ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್‌ಗೆ 250 ಗ್ರಾಂ ಚಿನ್ನ ಇದರ ಜೊತೆಗೆ 20 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿದ್ದರು. ಸುಮಂತ್‌ನ ತಂದೆ ಮೃತಪಟ್ಟಿದ್ದರಿಂದ, ತಾಯಿ ಮೀನಾಕ್ಷಿ ಜೊತೆ ಆತ ವಾಸವಿದ್ದನು.

HASSAN woman death dowry

ಮದುವೆಯಾದ ಎರಡು ತಿಂಗಳು ದಂಪತಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ 2 ತಿಂಗಳು ಕಳೆಯುತ್ತಿದ್ದಂತೆ ಸುಮಂತ್ ತಾಯಿ ಮೀನಾಕ್ಷಿ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಲು ಆರಂಭಿಸಿದ್ದಳು. ಇದರ ಜೊತೆಗೆ ಸುಮಂತ್ ಮದುವೆ ವೇಳೆ ಬ್ಯಾಂಕ್‌‌ನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು ಹೇಳಿದ್ದಾನೆ ಎಂಬುದು ರೋಹಿಣಿಗೆ ಗೊತ್ತಾಗಿತ್ತು. ಇವರಿಬ್ಬರಲ್ಲದೇ ಸುಮಂತ್ ಅಕ್ಕ ಸುಶ್ಮಿತಾ ಹಾಗೂ ಭಾವ ಪ್ರಮೋದ್ ಕೂಡ ಮನೆಗೆ ಬಂದಾಗಲೆಲ್ಲಾ ರೋಹಿಣಿಗೆ ಚುಚ್ಚು ಮಾತನಾಡುತ್ತಿದ್ದರು.

ಆದರೆ ರೋಹಿಣಿ ಈ ಬಗ್ಗೆ ಎಂದೂ ತನ್ನ ಪೋಷಕರ ಬಳಿ ಹೇಳಿಕೊಂಡಿರಲಿಲ್ಲ. ಆದರೆ ತನ್ನ ಸಹೋದರನಿಗೆ ಮೆಸೇಜ್‌ ಮಾಡಿ ಪತಿ ಸುಮಂತ್‌ ನೀಡುತ್ತಿದ್ದ ಕಿರುಕುಳದ ಬಗ್ಗೆ ಹೇಳಿದ್ದಳು. ಸುಮಂತ್‌ ರೋಹಿಣಿಗೆ ಯಾವುದಾದರೂ‌ ಫೋನ್ ಬಂದರೆ ಅನುಮಾನದಿಂದ ನೋಡುತ್ತಿದ್ದ. ಅಷ್ಟೇ ಅಲ್ಲದೇ ಪೋಷಕರಿಗೆ ಫೋನ್ ಮಾಡಿದರೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಿಕೊಂಡಿದ್ದ ರೋಹಿಣಿಯು, ಸಹೋದರಿಗೆ ನಿನ್ನ ಜೊತೆ ಮಾತನಾಡಬೇಕು, ಇನ್ನೂ ಕೆಲವು ವಿಷಯಗಳನ್ನು ಹೇಳಬೇಕು ಎಂದು ಸಹೋದರನಿಗೆ ಮೆಸೇಜ್‌ ಹಾಕಿದ್ದಳು.

HASSAN woman death dowry 1

ಆದರೆ ಭಾನುವಾರ ರೋಹಿಣಿ ಹಾಗೂ ಸುಮಂತ್ ದಂಪತಿ, ಸುಶ್ಮಿತಾ ಸೀಮಂತ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದರು. ಮಂಗಳವಾರ ಬೆಂಗಳೂರಿನಿಂದ ಇಬ್ಬರು ರೈಲಿನಲ್ಲಿ ಹೊರಟಿದ್ದಾರೆ. ಈ ವೇಳೆ ರೋಹಿಣಿ ತಂದೆಗೆ 2 ಬಾರಿ ಕರೆ ಮಾಡಿ ಚೆನ್ನಾಗಿಯೇ ಮಾತನಾಡಿದ್ದಾಳೆ. ದಂಪತಿ ಇಬ್ಬರು ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ರೈಲಿನಿಂದ ಇಳಿದಿದ್ದಾರೆ. ಅದಾದ ಬಳಿಕ ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೆರೆಯ ಬಳಿ ನಡೆದುಕೊಂಡು ಬಂದಿದ್ದು, ಕೆರೆಯಲ್ಲಿ ಗ್ರಾಮದ ಮಹಿಳೆಯರು ಬಟ್ಟೆ ಒಗೆಯುತ್ತಿದ್ದನ್ನು ಕಂಡ ಸುಮಂತ್ ಪತ್ನಿಗೆ ಇಲ್ಲೇ ಇರು ಎಂದು ಹೇಳಿ ಮರೆಯಾಗಿದ್ದಾನೆ. ರೋಹಿಣಿ ಕೆರೆಯ ಬಳಿ ಒಬ್ಬಳೆ ನಿಂತಿದ್ದನ್ನು ಅಲ್ಲಿದ್ದ ಮಹಿಳೆಯರು ನೋಡಿದ್ದಾರೆ. ಇದಾದ ಬಳಿಕ ರೋಹಿಣಿ ನಾಪತ್ತೆಯಾಗಿದ್ದಾಳೆ. ತಂದೆ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಟವರ್ ಲೊಕೇಷನ್ ಮೂಲಕ ರೋಹಿಣಿ ಮೊಬೈಲ್ ಇರುವ ಜಾಗವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆರೆಯ ಬಳಿ ಬಂದು ನೋಡಿದಾಗ ದಡದಲ್ಲಿ 1,760 ರೂ. ಹಣ, ಮೊಬೈಲ್ ಹಾಗೂ ಚಪ್ಪಲಿ ಕಂಡುಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಶೋಧಕಾರ್ಯ ನಡೆಸಿದಾಗ ರೋಹಿಣಿ ಶವ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

HASSAN woman death dowry 2

ಈ ಬಗ್ಗೆ ರೋಹಿಣಿ ಪೋಷಕರು ಮಾತನಾಡಿ, ಸುಮಂತ್ ತನ್ನ ಮಗಳನ್ನು ಹೊಡೆದು ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ. ಆಕೆಯ ಮೈಮೇಲೆ ಇರುವ ಗಾಯದ ಗುರುತುಗಳೇ ಇದಕ್ಕೆ ಸಾಕ್ಷಿ. ನಮ್ಮ ಮಗಳನ್ನು ಆಕೆಯ ಪತಿ ಸುಮಂತ್ ರೈಲಿನಲ್ಲಿ ಕರೆದುಕೊಂಡು ಬಂದು ಹೊಡೆದು ಕೊಲೆ ಮಾಡಿ ನಂತರ ಕೆರೆಗೆ ತಳ್ಳಿದ್ದಾನೆ ಎಂದು ರೋಹಿಣಿ ಪೋಷಕರು ಆರೋಪಿಸಿದ್ದಾರೆ. ನಮ್ಮ ಮಗಳ ಸಾವಿಗೆ ಸುಮಂತ್, ಮೀನಾಕ್ಷಿ, ಸುಶ್ಮಿತಾ ಹಾಗೂ ಪ್ರಮೋದ್‌ ಕಾರಣ ಇವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

Live Tv
[brid partner=56869869 player=32851 video=960834 autoplay=true]

TAGGED:DowryhassanWifeಪತಿಪತ್ನಿವರದಕ್ಷಿಣೆಹಾಸನ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
14 seconds ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
5 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
32 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
38 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?