ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣ ಸಂಬಂಧ ಭಾರತಿನಗರ ಪೊಲೀಸರು (Bharatinagara Police) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅನಿಲ್, ಅರುಣ್ ಹಾಗೂ ನವೀನ್ ಬಂಧಿತರೆಂದು ಗುರುತಿಸಲಾಗಿದೆ. ಅರುಣ್ ಹಾಗೂ ನವೀನ್ ಇಬ್ಬರು ಪ್ರಕರಣದ ಎ1 ಆರೋಪಿಯಾಗಿರುವ ಜಗದೀಶ್‌ನ ಸಹಚರರಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ
ಕೊಲೆ ಬಳಿಕ ಅರುಣ್ ಹಾಗೂ ನವೀನ್ ತಲೆಮರೆಸಿಕೊಂಡಿದ್ದರು. ಸದ್ಯ ಮೂವರನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬರಕ್ ಒಬಾಮಾ ಬಂಧಿಸುವ ಎಐ ಆಧಾರಿತ ವೀಡಿಯೋ ಹಂಚಿಕೊಂಡ ಟ್ರಂಪ್
ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಶಿವಪ್ರಕಾಶ್‌ನನ್ನು (ಬಿಕ್ಲು ಶಿವ) ಹಲಸೂರು ಮನೆಯ ಎದುರು ಜುಲೈ 15ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿಗಳಾದ ಕಿರಣ್, ವಿಮಲ್, ಪ್ರದೀಪ್, ಮದನ್ ಹಾಗೂ ಸ್ಯಾಮ್ಯುವೆಲ್‌ನನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು. ಪ್ರಕರಣದ ಎ5 ಆರೋಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಶನಿವಾರ ವಿಚಾರಣೆ ಮಾಡಲಾಗಿತ್ತು.