ಹಾವೇರಿ: ನೇಣು ಬಿಗಿದು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದವರಾದ ತಂದೆ ಹನುಮಂತಗೌಡ ಪಾಟೀಲ (54), ತಾಯಿ ಲಲಿತಾ ಪಾಟೀಲ (50), ಮತ್ತು ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ಭೀಕರ ರಸ್ತೆ ಅಪಘಾತ – ರಾಯಚೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು
Advertisement
Advertisement
ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರುಪಾಯಿ ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಈ ಸಾಲಬಾಧೆಯನ್ನು ತಾಳಲಾರದೆ ದಂಪತಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು ತಾನೂ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ.
Advertisement
ಘಟನೆ ನಡೆದ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಲಮಿಶ್ರಿತ ನೀರು ಕುಡಿದು ಮೂವರು ದುರ್ಮರಣ- ನೀರಿನ ಪರೀಕ್ಷೆಯಲ್ಲಿ ಬಹಿರಂಗವಾಯ್ತು ಸತ್ಯ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k