ಮಂಗಳೂರು: ಅನ್ಯಕೋಮಿನ ವ್ಯಕ್ತಿಯೋರ್ವನ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ (Mangaluru) ಕಾವೂರು ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕಳೆದ ಆಗಸ್ಟ್ 20ರಂದು ಸ್ಕೂಟರ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅನ್ಯ ಕೋಮಿನ ವ್ಯಕ್ತಿಯೋರ್ವರಿಗೆ ತಲವಾರು ಬೀಸಿದ್ದಾರೆ. ಈ ವೇಳೆ ಅವರು ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಕೇವಲ 24 ಗಂಟೆಯೊಳಗೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!
ಪಂಜಿಮೊಗರು ನಿವಾಸಿಗಳಾದ ಚರಣ್ ರಾಜ್, ಸುಮಂತ್ ಬರ್ಮನ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಚರಣ್ ರಾಜ್ ರೌಡಿ ಶೀಟರ್ ಆಗಿದ್ದು,ಜನರಲ್ಲಿ ಭಯ ಹುಟ್ಟಿಸಲು ಈ ಕೃತ್ಯ ನಡೆಸಿರೋದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]