ಮರಕ್ಕೆ ಕಾರು ಡಿಕ್ಕಿ – ಕಂದಮ್ಮ ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

Public TV
1 Min Read
CTD ACCIDENT 1

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.

CTD ACCIDENT 2

ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ (5) ಎಂದು ಗುರುತಿಸಲಾಗಿದ್ದು, ಇವರು ಕುಂದಾಪುರ ಮೂಲದವರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

CTD ACCIDENT

ಮೃತರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ನಟಸಾರ್ವಭೌಮ ಡಾ.ರಾಜ್‍ಕುಮಾರ್ ಪುತ್ಥಳಿ ಕದ್ದ ಕಳ್ಳರು!

Share This Article
Leave a Comment

Leave a Reply

Your email address will not be published. Required fields are marked *