ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.
ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ (5) ಎಂದು ಗುರುತಿಸಲಾಗಿದ್ದು, ಇವರು ಕುಂದಾಪುರ ಮೂಲದವರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ನಟಸಾರ್ವಭೌಮ ಡಾ.ರಾಜ್ಕುಮಾರ್ ಪುತ್ಥಳಿ ಕದ್ದ ಕಳ್ಳರು!